ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಛತ್ತೀಸ್‌ಗಡದಲ್ಲಿ ಮತ್ತೆ ನಕ್ಸಲರ ಅಟ್ಟಹಾಸ: ಐದು ವಾಹನಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಮಾವೋವಾದಿಗಳು

ಹೊಸದಿಗಂತ ಆನ್ ಲೈನ್ ಡೆಸ್ಕ್:

ಛತ್ತೀಸ್‌ಗಡದಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮೆರೆದಿದ್ದು, ನೀರು ಶುದ್ಧೀಕರಣ ಘಟಕದ ಕಾಮಗಾರಿಯಲ್ಲಿ ತೊಡಗಿದ್ದ ಐದು ವಾಹನಗಳಿಗೆ ಬೆಂಕಿ ಇಟ್ಟು ವಿಕೃತಿ ಮೆರೆದಿದ್ದಾರೆ.
ಭಾನುವಾರ ಸಂಜೆ ಛತ್ತೀಸ್‌ಗಡದ ಬಿಜಾಪುರ ಜಿಲ್ಲೆ ನೈಮಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಐದು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಎಲ್ಲ ವಾಹನಗಳು ಸುಟ್ಟು ಭಸ್ಮವಾಗಿವೆ.
ಕೆಲ ದಿನಗಳ ಹಿಂದೆಯಷ್ಟೇ ಬಿಜಾಪುರ ಹಾಗೂ ಸೂಕ್ಮಾ ಜಿಲ್ಲೆಯ ಗಡಿಭಾಗದ ಅರಣ್ಯದಲ್ಲಿ ಸಿಆರ್‍ ಪಿಎಫ್ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾಳಗದಲ್ಲಿ 22 ಜನ ಯೋಧರು ಹುತಾತ್ಮರಾಗಿದ್ದಾರೆ. ಈ ಘಟನೆ ಮಾಸುವ ಮುನ್ನವೇ ಮತ್ತೊಮ್ಮೆ ನಕ್ಸಲೀಯರ ಕರಾಳಮುಖ ಅನಾವರಣಗೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss