ಮ್ಯಾಪ್ ಅರುಣಾಚಲ ಪ್ರದೇಶ: ಇದು ಸಾರ್ವಭೌಮತ್ವದ ಸಾಮಾನ್ಯ ಪ್ರಕ್ರಿಯೆ ಎಂದ ಚೀನಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  

ಅರುಣಾಚಲ ಪ್ರದೇಶ (Arunachal Pradesh) ಮತ್ತು ಅಕ್ಸಾಯ್ ಚಿನ್ ಪ್ರದೇಶವನ್ನು ಒಳಗೊಂಡಿರುವ ಸ್ಟ್ಯಾಂಡರ್ಡ್ ಮ್ಯಾಪ್ ಗೆ (standard map) ಚೀನಾ ಬಿಡುಗಡೆಗೊಳಿಸಿದ ಬೆನ್ನಲ್ಲೇ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಈ ಕುರಿತು ಚೀನಾ (China) ಪ್ರತಿಕ್ರಿಯೆ ನೀಡಿದೆ.

ಚೀನಾದ ಸ್ಟ್ಯಾಂಡರ್ಡ್ ಮ್ಯಾಪ್‌ನ 2023 ರ ಆವೃತ್ತಿಯ ಬಿಡುಗಡೆಯು ಕಾನೂನಿಗೆ ಅನುಸಾರವಾಗಿ ದೇಶದ ಸಾರ್ವಭೌಮತ್ವದ ಸಾಮಾನ್ಯ ಪ್ರಕ್ರಿಯೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ.

ಇದನ್ನು ಸಂಬಂಧಿತ ಪಕ್ಷಗಳು ವಸ್ತುನಿಷ್ಠವಾಗಿ ಪರಿಗಣಿಸುತ್ತವೆ ಮತ್ತು ಅದರ ಬಗ್ಗೆ ಹೆಚ್ಚಿನ ವಿವರಣೆ ಬಯಸುವುದಿಲ್ಲ ಎಂದು ಭಾವಿಸುತ್ತೇವೆ ಎಂದು ಚೀನಾ ಹೇಳಿದೆ.

ಇದು ಆಧಾರ ರಹಿತ. ಭಾರತದ ಭೂಪ್ರದೇಶದ ಮೇಲೆ ಹಕ್ಕು ಸಾಧಿಸುವ ಚೀನಾದ 2023 ರ ‘ಸ್ಟ್ಯಾಂಡರ್ಡ್ ಮ್ಯಾಪ್’ ಎಂದು ಕರೆಯಲ್ಪಡುವ ಭೂಪಟಕ್ಕೆ ನಾವು ಇಂದು ರಾಜತಾಂತ್ರಿಕ ಮಾರ್ಗಗಳ ಮೂಲಕ ಬಲವಾದ ಪ್ರತಿಭಟನೆಯನ್ನು ದಾಖಲಿಸಿದ್ದೇವೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಈ ಹಕ್ಕುಗಳನ್ನು ನಾವು ತಿರಸ್ಕರಿಸುತ್ತೇವೆ ಏಕೆಂದರೆ ಅವುಗಳಿಗೆ ಯಾವುದೇ ಆಧಾರವಿಲ್ಲ. ಚೀನಾದ ಕಡೆಯಿಂದ ಇಂತಹ ಕ್ರಮಗಳು ಗಡಿ ಪ್ರಶ್ನೆಯ ಪರಿಹಾರವನ್ನು ಸಂಕೀರ್ಣಗೊಳಿಸುತ್ತವೆ ಎಂದು ಅವರು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!