August 26, 2026
Wednesday, August 26, 2026
spot_img

ಸಚಿವ ಸಂಪುಟ ವಿಸ್ತರಣೆಗೆ ದೆಹಲಿಯಲ್ಲಿ ಮ್ಯಾರಥಾನ್ ಸಭೆ: ಎರಡು ದಿನಾಂಕ ಮುಂದಿಟ್ಟ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚಟುವಟಿಕೆಗಳು ವೇಗ ಪಡೆದಿದ್ದು, ದೆಹಲಿಯಲ್ಲಿ ನಡೆದ ಸರಣಿ ಸಭೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ. ಇದೇ ವೇಳೆ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ರಾಜಧಾನಿಯಲ್ಲಿ ಲಾಬಿ ನಡೆಸುತ್ತಿದ್ದಾರೆ.

ರಾಹುಲ್ ಗಾಂಧಿ ಜೊತೆ ಮಹತ್ವದ ಚರ್ಚೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದರು. ಪಕ್ಷದ ಹಿರಿಯ ನಾಯಕರು ಕೂಡ ಸಭೆಯಲ್ಲಿ ಭಾಗವಹಿಸಿ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ.

ಜುಲೈ 20 ಅಥವಾ 22ಕ್ಕೆ ಸಾಧ್ಯತೆ?

ಸಂಪುಟ ವಿಸ್ತರಣೆಗೆ ಜುಲೈ 20 ಅಥವಾ ಜುಲೈ 22ರಂದು ಅವಕಾಶವಿದೆ ಎಂಬ ಪ್ರಸ್ತಾಪ ಸಭೆಯಲ್ಲಿ ಕೇಳಿಬಂದಿದೆ ಎನ್ನಲಾಗಿದೆ. ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದ್ದು, ಅಗತ್ಯವಿದ್ದರೆ ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆಯೂ ಇದೆ. ಇದೇ ವೇಳೆ ಸಚಿವ ಸ್ಥಾನಕ್ಕಾಗಿ ಹಲವು ಕಾಂಗ್ರೆಸ್ ಶಾಸಕರು ದೆಹಲಿಯಲ್ಲೇ ಬೀಡುಬಿಟ್ಟಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !