ಉಪರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಮಾರ್ಗರೇಟ್‌ ಆಳ್ವಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳಿಂದ ಆಯ್ಕೆಯಾಗಿರುವ ಜಂಟಿ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಅವರ ಜೊತೆ ಹಲವು ನಾಯಕರು ಆಗಮಿಸಿದ್ದರು.

ಎಂ ವೆಂಕಯ್ಯ ನಾಯ್ಡು ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ವೆಂಕಯ್ಯನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳಲಿದೆ.

ಮಾರ್ಗರೇಟ್ ಆಳ್ವಾ ಅವರೊಂದಿಗೆ ಕಾಂಗ್ರೆಸ್‌ನ ರಾಹುಲ್ ಗಾಂಧಿ, ಎನ್‌ಸಿಪಿಯ ಶರದ್ ಪವಾರ್, ಸಿಪಿಐ-ಎಂನ ಸೀತಾರಾಂ ಯೆಚೂರಿ, ಸಿಪಿಐನ ಡಿ ರಾಜಾ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಪ್ರಮುಖ ವಿರೋಧ ಪಕ್ಷದ ನಾಯಕರು ಆಳ್ವಾ ಅವರಿಗೆ ಸಾಥ್‌ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!