ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………..
ಹೊಸದಿಗಂತ ವರದಿ,ಚಾಮರಾಜನಗರ:
ಕೆಸರಿನಲ್ಲಿ ಸಿಲುಕಿ ನರಳಾಡುತ್ತಿದ್ದ ಕಾಡಾನೆ ಮರಿಯೊಂದನ್ನು ರಕ್ಷಿಸಿರುವ ಘಟನೆ ಇಂದು ಬೆಳಗ್ಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಿಭಾಗದ ಮೊಳೆಯೂರು ವಲಯದ ಮೀನಕಟ್ಟೆ ಕೆರೆ ಬಳಿ ನಡೆದಿದೆ.
ಕೆಸರಿನಲ್ಲಿ ಸಿಲುಕಿ ಒದ್ದಾಡಿದ ಕಾಡಾನೆ ಮರಿಯೊಂದು ಕೆಸರಿನಲ್ಲಿ ಸಿಲುಕಿ ಮೇಲೆಳಲೂ ಆಗದೆ, ಹೊರ ಬರಲೂ ಆಗದೆ ಒದ್ದಾಡುತ್ತಿದ್ದನ್ನು ಕಂಡ ಅರಣ್ಯ ಇಲಾಖೆ ಸಿಬ್ಬಂದಿ, ಮೇಲಾಧಿಕಾರಿಗಳ ಗಮನಕ್ಕೆ ತಂದು ಜೆಸಿಬಿ ಸಹಾಯದಿಂದ ಕಾಡಾನೆ ಮರಿಯನ್ನು ರಕ್ಷಣೆ ಮಾಡಿದ್ದಾರೆ. ಸದ್ಯ, ಆನೆ ಮರಿಯ ಆರೋಗ್ಯ ಉತ್ತಮವಾಗಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ. ತಾಯಿ ಆನೆ ಬಗ್ಗೆ ನಿಗಾ ಇಡುವ ಕುರಿತು ಯಾವುದೇ ವಿವರ ನೀಡಿಲ್ಲ.