February 9, 2026
Monday, February 9, 2026
spot_img

ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ಬರೋಬ್ಬರಿ ಎಂಟು ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಕೆಂಪೇಗೌಡ ನಿಲ್ದಾಣದಲ್ಲಿ ಬರೋಬ್ಬರಿ ಎಂಟು ಕೋಟಿ ರೂಪಾಯಿ ಮೌಲ್ಯದ ಹೈಡ್ರೋಫೋನಿಕ್‌ ಗಾಂಜಾ ಸೀಝ್‌ ಮಾಡಲಾಗಿದೆ.

https://twitter.com/blrcustoms/status/2020800591417487871?ref_src=twsrc%5Etfw%7Ctwcamp%5Etweetembed%7Ctwterm%5E2020800591417487871%7Ctwgr%5E4a1f94fc8b9386427c94d5edda36d62cc489b3ef%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fbengaluru-rural%2Fbengaluru-airport-customs-officials-seize-ganja-worth-8-crore-two-passengers-arrested-1146849.html

ಕಸ್ಟಮ್‌ ಅಧಿಕಾರಿಗಳು ಆರೋಪಿ ಸಮೇತ ಹೈಡ್ರೋಫೋನಿಕ್‌ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು ವಿದೇಶಿ ಪ್ರಯಾಣಿಕರು ಗಾಂಜಾ ತಂದಿದ್ದು, ಇಮಗ್ರೇಷನ್‌ ವಿಭಾಗದಲ್ಲಿ ಚೆಕಿಂಗ್‌ ವೇಳೆ ಸಿಕ್ಕಿಬಿದ್ದಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಅಕ್ರಮವಾಗಿ ವಿದೇಶಕ್ಕೆ ಸಾಗಿಸಲಾಗುತ್ತಿದ್ದ 2 ಕೋಟಿ ರೂ. ಮೌಲ್ಯದ ವಜ್ರ ಸೇರಿದಂತೆ ವಿದೇಶಿ ಹಣವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !