ಹೊಸದಿಗಂತ ವರದಿ, ಶ್ರೀರಂಗಪಟ್ಟಣ:
ಬೆಂಗಳೂರಿಂದ ಮೈಸೂರಿಗೆ ತೆರಳುತ್ತಿದ್ದ ಮದುವೆ ಜನರನ್ನ ಕರೆದೊಯ್ಯುತ್ತಿದ್ದ ಖಾಸಗಿ ಬಸ್‌ವೊಂದು ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ ಶ್ರೀರಂಗಪಟ್ಟಣ ತಾಲೂಕು ಗಣಂಗೂರು ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಸ್ಸಿನಲ್ಲಿ ಹೊಗೆ ಕಾಣಿಸಿಕೊಂಡ ನಂತರ ಪ್ರಯಾಣಿಕರ ಕೋರಿಕೆಯ ಮೆರೆಗೆ ಬಸ್ ನಿಲ್ಲಿಸಿದ್ದಾರೆ, ಪ್ರಯಾಣಿಕರು ಬಸ್‌ನಿಂದ ಕೆಳಗೆ ಇಳಿಯುತ್ತಿದ್ದಂತೆ ಬೆಂಕಿ ಇಡೀ ಬಸ್ಸಿಗೆ ಆವರಿಸಿದೆ.
ಕ್ಷಣಾರ್ಧದಲ್ಲಿ ಬಸ್ ಸುಟ್ಟು ಕರಕಲಾಗಿದೆ, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಬಳಿಕ ಬಸ್ಸಿನ ಕೆಳಗಿರುವ ಲಗೇಜ್ ಲಾಂಚ್‌ನಲ್ಲಿ ಇಟ್ಟಿದ್ದ ಅರೆಬರೆ ಸುಟ್ಟ ಬ್ಯಾಗ್‌ಗಳನ್ನು ಹೊರತೆಗೆಯಲಾಯಿತು.
ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.