ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೋಹಕ ತಾರೆ, ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಮದುವೆ ಆಗುತ್ತಿದ್ದಾರೆ. ರಮ್ಯಾಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಇದೇ ನವೆಂಬರ್ ತಿಂಗಳಲ್ಲಿ ಹಸೆಮಣೆ ಏರುವ ಸಾಧ್ಯತೆ ಇದೆ.
ರಾಜಸ್ಥಾನ ಮೂಲದ ಟೆಕ್ಸ್‌ಟೈಲ್ ಉದ್ಯಮಿ ಜೊತೆ ರಮ್ಯಾ ನಿಶ್ಚಿತಾರ್ಥ ಆಗಿದೆ ಅನ್ನೋ ವಿಚಾರ ಗಾಂದಿನಗರದ ಗಲ್ಲಿಗಲ್ಲಿಗಳಲ್ಲಿ ಕೇಳಿ ಬಂತು. ಆಪ್ತರು ಹೇಳುವಂತೆ ಅಕ್ಟೋಬರ್ ನಲ್ಲಿ ಎಂಗೇಜ್‌ಮೆಂಟ್ ಆಗಲಿದ್ದಾರಂತೆ. ನವೆಂಬರ್‌ನಲ್ಲಿ ಬೆಂಗಳೂರಿನ ಅರಮನೆಯಲ್ಲಿ ಮದುವೆ ನಡೆಯಲಿದೆ. ರಾಜಸ್ಥಾನದ ಲ್ಲಿ ಆರತಕ್ಷತೆ ನಡೆಲಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಇದನ್ನು ಅವರ ಆಪ್ತರು ಕೂಡ ಖಚಿತ ಪಡಿಸಿದ್ದಾರೆ.
ಆದ್ರೆ ರಮ್ಯಾ, ಇದೊಂದು ರೂಮರ್ಸ್ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮಾಡಿದ್ದಾರೆ. ಹಲವಾರು ಬಾರಿಯೂ ಮದುವೆ ಸುದ್ದಿ ಬಂದಾಗ ಅದನ್ನು ರಮ್ಯಾ ಅಲ್ಲಗಳೆಯುತ್ತಲೇ ಬಂದಿದ್ದಾರೆ. ಎಂದಿನಂತೆ ಈ ಬಾರಿಯೂ ಅದನ್ನೇ ಮಾಡಿದ್ದಾರೆ.