ಹೊಸದಿಗಂತ ವರದಿ , ಮುಂಡಗೋಡ:
ಅಪ್ರಾಪ್ತೆ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಮದುವೆಯಾಗುವುದಾಗಿ ಹೇಳಿ ಸಲುಗೆಯಿಂದ ವರ್ತಿಸಿದ ಆರೋಪದ ಮೇಲೆ ಪೊಲೀಸರು ಫೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ಯುವಕನನ್ನು ಬಂಧಿಸಿದ್ದಾರೆ.
ಪಟ್ಟಣ ವ್ಯಾಪ್ತಿಯ ನಿವಾಸಿ ಮಲ್ಲಿಕ ಆರೋಪಿತನಾಗಿದ್ದಾನೆ. ಅಪ್ರಾಪ್ತೆ ವಿದ್ಯಾರ್ಥಿನಿ ಆಗಷ್ಟ್ ೨೪ ರಂದು ಮನೆಯಿಂದ ಮದರಾಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವಳು ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದ ಬಗ್ಗೆ ಅಪ್ರಾಪ್ತೆಯ ತಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದರು. ಮಂಗಳವಾರ ಈ ಬಗ್ಗೆ ಪೊಲೀಸರು ಯುವಕನ ವಿರುದ್ಧ ಪೋಕ್ಸೋ ಅಡಿ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.