ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದು, ಎಲ್ಲೆಡೆ ಮದುವೆ ಪತ್ರಿಕೆ ನೀಡುತ್ತಿದ್ದಾರೆ.
ಫೆ.16ರಂದು ಮದುವೆ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆ ಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮದುವೆ ಪತ್ರಿಕೆಯನ್ನು ನೀಡಿದ್ದಾರೆ.
ಇಂದು (ಜ.9) ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಡಾಲಿ ಮದುವೆ ಪತ್ರಿಕೆ ನೀಡಿದ್ದಾರೆ.
ಅಂದಹಾಗೆ, ಡಾಲಿ ಧನಂಜಯ ಸಿನಿಮಾ ಕೆಲಸಕ್ಕೆ ಬ್ರೇಕ್ ನೀಡಿ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಮಾಜಿ ಪಿಎಂ ದೇವೇಗೌಡ, ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರಿಗೆ ಮದುವೆಗೆ ಆಹ್ವಾನಿಸಿದ್ದಾರೆ.
ಡಾಕ್ಟರ್ ಧನ್ಯತಾ ಜೊತೆ ಡಾಲಿ ಮೈಸೂರಿನಲ್ಲಿ ಹಸೆಮಣೆ ಏರಲಿದ್ದಾರೆ. ಫೆ.16ರಂದು ನಡೆಯಲಿರುವ ಈ ಮದುವೆಗೆ ರಾಜಕೀಯ ಗಣ್ಯರು, ಸಿನಿಮಾ ತಾರೆಯರು ಭಾಗಿಯಾಲಿದ್ದಾರೆ.