ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಮದುಮಗಳು ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಾಳಿ ಕಟ್ಟಲು ಇನ್ನೇನು ಕೆಲವೇ ನಿಮಿಷಗಳು ಬಾಕಿ ಇದ್ದವು.. ಈ ವೇಳೆ ವೀಳ್ಯದೆಲೆ ಶಾಸ್ತ್ರದಲ್ಲಿ ಭಾಗಿಯಾಗಿದ್ದ ವಧು ದಿಢೀರನೇ ಕುಸಿದುಬಿದ್ದು ಮದುವೆ ಮಂಟಪದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ಸೃಜನಾ ಮೃತಪಟ್ಟ ವಧು.
ವಿಶಾಖಪಟ್ಟಣ ಜಿಲ್ಲೆಯ ಮಧುರವಾಡದಲ್ಲಿ ಮದುವೆ ನಡೆಯುತ್ತಿತ್ತು. ವಧು ಸೃಜನಾ ಮತ್ತು ವರ ವೀಳ್ಯದೆಲೆ ಶಾಸ್ತ್ರದ ಆಚರಣೆಯಲ್ಲಿ ತೊಡಗಿದ್ದರು. ಈ ವೇಳೆ ವಧು ಸೃಜನಾ ಇದ್ದಕ್ಕಿದ್ದಂತೆ ಮದುವೆ ಮಂಟಪದಲ್ಲೇ ಕುಸಿದು ಬಿದ್ದಿದ್ದಾರೆ. ಆಗ ಅಲ್ಲೇ ಇದ್ದ ಕುಟುಂಬ ಸದಸ್ಯರು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಸೃಜನಾ ಅಷ್ಟೊತ್ತಿಗಾಗಲೇ ಇಹಲೋಕ ತ್ಯಜಿಸಿದ್ದರು. ಸಂಭ್ರಮದಲ್ಲಿದ್ದ ಮನೆಯಲ್ಲಿ ವಧುವಿನ ಸಾವಿನಿಂದ ಸೂತಕದ ಛಾಯೆ ಆವರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!