ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವಜೋಡಿ ಹೊಡೆದಾಡಿಕೊಂಡಿದ್ದು , ಇವರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.
ಕೋಲಾರ (ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಆಂಧ್ರದ ಬೈನಪಲ್ಲಿ ಗ್ರಾಮದ ಲಿಖಿತಾಶ್ರೀ ಮೃತಪಟ್ಟಿದ್ದಾಳೆ. ಚಂಬರಸನಹಳ್ಳಿಯ ನವೀನ್ ಸ್ಥಿತಿ ಗಂಭೀರವಾಗಿದೆ.
ನವೀನ್ ಮತ್ತು ಲಿಖಿತಾಶ್ರೀ ಜೋಡಿ ಪರಸ್ಪರ ಒಪ್ಪಿಕೊಂಡು ಇಂದು ಮುಂಜಾನೆ ಹಿರಿಯರ ಸಮ್ಮುಖದಲ್ಲಿ ಚಂಬರಸನಹಳ್ಳಿಯಲ್ಲಿ ಮದುವೆಯಾದರು. ಮದುವೆ ಕೆಲಗಂಟೆಗಳ ನಂತರ ನವಜೋಡಿ ರೂಂಗೆ ಹೋಗಿದ್ದಾರೆ. ಬಳಿಕ ಮಚ್ಚಿನಿಂದ ಪರಸ್ಪರರ ಮೇಲೆ ಹಲ್ಲೆ ನಡೆಸಿಕೊಂಡಿದ್ದಾರೆ.
ಮಾರಾಮಾರಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಲಿಖಿತಾಶ್ರೀ ಸಾವನ್ನಪ್ಪಿದ್ದಾಳೆ. ನವೀನ್ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಅಂಡರ್‌ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಬ್ಬರೂ ಪ್ರೀತಿಸಿ ಎರಡೂ ಕುಟುಂಬದವರನ್ನು ಒಪ್ಪಿಸಿ ಮದುವೆಯಾಗಿದ್ದರು. ಇಬ್ಬರ ಗಲಾಟೆಗೆ ಕಾರಣ ತಿಳಿದು ಬಂದಿಲ್ಲ.