ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೀತಿಸಿ ಮದುವೆಯಾದ ಜೋಡಿಯೊಂದು ಮದುವೆಯೇ ದಿನವೇ ದುರಂತ ಅಂತ್ಯ ಕಂಡಿದೆ. ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರರಿಬ್ಬರು ಪರಸ್ಪರ ಹೊಡೆದಾಡಿಕೊಂಡಿರೋ ಘಟನೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ.
ಲಿಖಿತಶ್ರೀ (20) ಹಾಗೂ ನವೀನ್ (29) ಮೃತ ದುರ್ದೈವಿಗಳು. ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದ ನವೀನ್, ಬೈನಪಲ್ಲಿಯ ಲಿಖಿತಶ್ರೀ ಪ್ರೀತಿಸಿ ಎರಡೂ ಕುಟುಂಬದವರನ್ನು ಒಪ್ಪಿಸಿ ನಿನ್ನೆ ಮದುವೆಯಾಗಿದ್ದರು. ಮದುವೆಯಾದ ನಂತರ ಇಬ್ಬರು ಒಂದು ರೂಮ್‌ಗೆ ತೆರಳಿದ್ದು, ಅಲ್ಲಿ ಮಾತಿಗೆ ಮಾತು ಬೆಳೆಸಿದ್ದಾರೆ. ಇದು ಅತಿರೇಖಕ್ಕೆ ಹೋಗಿ ಹೊಡೆದಾಟ ಆರಂಭವಾಗಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಕ್ಷಣವೇ ಆಸ್ಪತ್ರೆಗೆ ಇಬ್ಬರನ್ನೂ ದಾಖಲಿಸಲಾಗಿದ್ದು, ಲಿಖಿತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆಂದು ವರನನ್ನು ರಾತ್ರಿ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನವೀನ್ ಮೃತಪಟ್ಟಿದ್ದಾನೆ.