ಮದುವೆ ದಿನ ಮತದಾನ ಮಾಡಿ ಮಾದರಿಯಾದ ಯುವತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ನವವಧು ಒಬ್ಬರು ಪಾಲ್ಗೊಂಡು ಮತದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಎಂಬಿಎ ಪ್ರಥಮ ವರ್ಷ ಅಧ್ಯಯನ ಮಾಡುತ್ತಿರುವ ಪ್ರೀತಿ ಚೌಧರಿ ಸಾಂಪ್ರದಾಯಿಕ ಉಡುಗೆಯಲ್ಲಿಯೇ ಮತಗಟ್ಟೆಗೆ ಆಗಮಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಮೊದಲ ಬಾರಿಗೆ ಮತದಾನ ಮಾಡಿರುವುದು ನನಗೆ ಸಂತಸವಿದೆ. ದೇಶದ ವಿಕಾಸದ ಹಿನ್ನೆಲೆ ನಾನು ನನ್ನ ಹಕ್ಕನ್ನು ಚಲಾಯಿಸಿದ್ದೇನೆ. ವಿವಾಹಕ್ಕೆ 10 ನಿಮಿಷ ಸಮಯ ಇದ್ದಿದ್ದರಿಂದ ಮತಗಟ್ಟೆಗೆ ಬಂದು ಮತದಾನ ಮಾಡಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮೊದಲ ಹಂತದಲ್ಲಿ ಗುಜರಾತ್‌ನಲ್ಲಿ ಅತಿ ಹೆಚ್ಚು ಯುವ ಮತದಾರರು ಸೂರತ್‌ನಲ್ಲಿ ನೋಂದಣಿಯಾಗಿದ್ದಾರೆ. ಅವರ ಕೈಯಲ್ಲಿ ಗೋರಂಟಿ ಜತೆಗೆ ಮತದಾನದ ಶಾಯಿಯೂ ಇದ್ದಿದ್ದು ಗಮನಸೆಳೆಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!