Friday, June 9, 2023

Latest Posts

ವಿವಾಹಿತ ಮಹಿಳೆ ನೇಣಿಗೆ ಶರಣು

ಹೊಸದಿಗಂತ ವರದಿ ಮಡಿಕೇರಿ:

ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ಮಡಿಕೇರಿಯಲ್ಲಿ ನಡೆದಿದೆ.

ನಗರದ ಹೊಸ ಬಡಾವಣೆ ನಿವಾಸಿ ಭೂಮಿಕಾ (28) ಆತ್ಮಹತ್ಯೆಗೆ ಶರಣಾದವರಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಹೊಸಬಡಾವಣೆಯ ಅರಣ್ಯ ಇಲಾಖೆ ಕಚೇರಿ ಬಳಿ ಇರುವ ಮನೆಯಲ್ಲಿ ಪೂರ್ವಾಹ್ನ 11 ಗಂಟೆ ವೇಳೆಗೆ ಈ ಘಟನೆ ನಡೆದಿದೆ.

ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದ ಈಕೆ ಪತಿ ಹಾಗೂ‌ ಒಂದು ವರ್ಷದ ಮಗಳನ್ನು ಅಗಲಿದ್ದಾರೆ. ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!