ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಬ್ಬರು ಮಕ್ಕಳೊಂದಿಗೆ ವಿವಾಹಿತ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಪುತ್ರರನ್ನು ಕೆರೆಗೆ ತಳ್ಳಿದ ಬಳಿಕ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೊಲೀಸರ ಪ್ರಕಾರ, ಮೃದುಲಾ ಎಂಬ ವಿವಾಹಿತ ಮಹಿಳೆ ತನ್ನ ಇಬ್ಬರು ಮಕ್ಕಳಾದ ಪ್ರಜ್ಞಾ (5) ಮತ್ತು ಮಹದೇವ್ (7) ಜೊತೆಗೆ ಸತ್ತುಪಲ್ಲಿಯ ತಮರ್ ಕೆರೆಗೆ ಹಾರಿದ್ದಾರೆ. ವಿವಾಹಿತ ಮಹಿಳೆ ಮೊದಲು ತನ್ನ ಇಬ್ಬರು ಮಕ್ಕಳನ್ನು ಕೆರೆಗೆ ನೂಕಿದ್ದಾರೆ ಬಳಿಕ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳೀಯರು ಕೆರೆಯಲ್ಲಿ ಮೂವರ ಮೃತದೇಹಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಸ್ಥಳೀಯರ ನೆರವಿನಿಂದ ಪೊಲೀಸರು ಮೂರು ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.