ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಕ್ನೋ ಸೂಪರ್ ಜೈಂಟ್ಸ್ ತಂಡ ಮಿಚೆಲ್ ಮಾರ್ಷ್ (60) ಮತ್ತು ಐಡೆನ್ ಮಾರ್ಕ್ರಮ್ (53) ಅವರ ಅರ್ಧಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ಗೆ 204 ರನ್ಗಳನ ಕಠಿಣ ಗುರಿ ನೀಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಮಿಚೆಲ್ ಮಾರ್ಷ್ ಮತ್ತು ಐಡೆನ್ ಮಾರ್ಕ್ರಾನ್ ಉತ್ತಮ ಆರಂಭ ನೀಡಿದರು. ಇವರಿಬ್ಬರ ನಡುವೆ ಮೊದಲ ವಿಕೆಟ್‌ಗೆ 76 ರನ್‌ಗಳ ಜೊತೆಯಾಟ ನೀಡಿದರು. ಮಿಚೆಲ್ ಮಾರ್ಷ್ 31 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್ ಸಹಿತ 60 ರನ್ ಗಳಿಸಿ ಔಟಾದರು. ನಂತರ ಬಂದ ನಿಕೋಲಸ್ ಪೂರನ್ 6 ಎಸೆತಗಳಲ್ಲಿ ಕೇವಲ 12 ರನ್ ಗಳಿಸಲಷ್ಟೇ ಶಕ್ತರಾದರೆ, ನಾಯಕ ರಿಷಭ್ ಪಂತ್ 6 ಎಸೆತಗಳಲ್ಲಿ ಎರಡು ರನ್ ಗಳಿಸಿ ಔಟಾದರು.
ಬಳಿಕ ಆಯುಷ್ ಬದೋನಿ ಮತ್ತು ಮಾರ್ಕ್ರಮ್ 4ನೇ ವಿಕೆಟ್‌ಗೆ 51 ರನ್‌ಗಳ ಜೊತೆಯಾಟ ನೀಡಿ ತಂಡದ ಮೊತ್ತ ಹೆಚ್ಚಿಸಿದರು. ಬದೋನಿ 19 ಎಸೆತಗಳಲ್ಲಿ 30 ರನ್ ಗಳಿಸಿಧರುನ್. ಐಡೆನ್ ಮಾರ್ಕ್ರಾಮ್ 38 ಎಸೆತಗಳಲ್ಲಿ 2 ಬೌಂಡರಿ, 4 ಸಿಕ್ಸರ್ಗಳ ಸಹಿತ 53 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಡೇವಿಡ್ ಮಿಲ್ಲರ್ 14 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ 27 ರನ್ಗಳಿಸಿದರು.