ಹುತಾತ್ಮ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಹಾರ ಮೊತ್ತ 50 ಲಕ್ಷ ರೂ.ಗೆ ಹೆಚ್ಚಳ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಹುತಾತ್ಮ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಹಾರ ಮೊತ್ತ 50 ಲಕ್ಷ ರೂ.ಗೆ ಹೆಚ್ಚಳ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಹುತಾತ್ಮ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಹಾರ ಮೊತ್ತವನ್ನು 50 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಮೊದಲು ಹುತಾತ್ಮ ಅರಣ್ಯ ಸಿಬ್ಬಂದಿಗೆ 20 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ಇದನ್ನು ಯಡಿಯೂರಪ್ಪ ಅವರು 30 ಲಕ್ಷ ರೂ.ಗೆ ಏರಿಸಿದ್ದರು. ಇದೀಗ 50 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ನೇಮಕಾತಿ ಸಂಬಂಧಿ ಎಲ್ಲಾ ಕೆಲಸಗಳು ಸುಲಭ ಮಾಡುತ್ತೇವೆ. ಅರಣ್ಯವನ್ನು ನೀವು ರಕ್ಷಣೆ ಮಾಡಿ, ನಾವು ನಿಮ್ಮನ್ನು ರಕ್ಷಣೆ ಮಾಡುತ್ತೇವೆ. ಎಕೋ ಸೆನ್ಸಿಟಿವ್ ವಲಯಗಳ ಹೆಚ್ಚಳಕ್ಕೆ ವಿಶೇಷ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದು ಸಿಎಂ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!