ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುತಾತ್ಮ ಪೊಲೀಸರ ಗುಂಪು ವಿಮೆ ಮೊತ್ತವನ್ನು 20 ಲಕ್ಷ ರೂಪಾಯಿಯಿಂದ 50 ಲಕ್ಷ ರೂಪಾಯಿಗೆ ಹೆಚ್ಚಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಗುಂಪು ವಿಮೆ ಮೊತ್ತವನ್ನು 50 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದಿದ್ದಾರೆ.
ಪೊಲೀಸ್ ವ್ಯವಸ್ಥೆಯು ರಾಜ್ಯ ಮತ್ತು ಸರ್ಕಾರದ ಘನತೆ ಹೆಚ್ಚಿಸುವ ಕಾರ್ಯ ಮಾಡುತ್ತದೆ. ನಮ್ಮ ಪೊಲೀಸ್ ಇಲಾಖೆಗೆ ದೇಶದಲ್ಲೇ ಉತ್ತಮ ಹೆಸರಿದೆ ಎಂದಿದ್ದಾರೆ.