spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ಏರಿಕೆಯಾಗಲಿದೆ ಮಾರುತಿ ಸುಜುಕಿ ಕಾರ್ ಬೆಲೆ!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಒಂದೆಡೆ ಕೊರೋನಾ ಸಂಕಷ್ಟ ಮತ್ತೊಂದೆಡೆ ಉತ್ಪಾದಕ ವೆಚ್ಚ ಹೆಚ್ಚಳದಿಂದಾಗಿ ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ತನ್ನ ಕಾರುಗಳ ಬೆಲೆ ಹೆಚ್ಚಿಸುವುದಾಗಿ ಮಾರುತಿ ಸುಜುಕಿ ಇಂಡಿಯಾ (ಎಂಎಸ್ಐ) ಸೋಮವಾರ ತಿಳಿಸಿದೆ.
ಕಳೆದ ವರ್ಷದಲ್ಲಿ ಕಂಪನಿಯ ವಾಹನಗಳ ವೆಚ್ಚವು ವಿವಿಧ ಉತ್ಪಾದಕ ವೆಚ್ಚಗಳ ಹೆಚ್ಚಳದಿಂದಾಗಿ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಆದ್ದರಿಂದ, ಹೆಚ್ಚುವರಿ ಹೊರೆ ಇಳಿಸಲು ಬೆಲೆ ಏರಿಕೆ ಮಾಡುವುದು ಅಗತ್ಯವಾಗಿದೆ ಎಂದು ಕಂಪನಿ ಹೇಳಿದೆ.
ಆದರೆ ಎಷ್ಟು ಏರಿಕೆಯಾಗಲಿದೆ ಎಂದು ಬಹಿರಂಗಪಡಿಸಿಲ್ಲ. ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ) ಬೆಲೆ ಏರಿಕೆಯನ್ನು ಯೋಜಿಸಲಾಗಿದೆ ಮತ್ತು ಹೆಚ್ಚಳವು ವಿಭಿನ್ನ ಮಾದರಿಗಳಿಗೆ ಬದಲಾಗುತ್ತದೆ ಎಂದು ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss