ಮಾರುತಿ ಸುಜುಕಿ ಎಲ್ಲಾ ಮಾದರಿಯ ಕಾರುಗಳ ಬೆಲೆ ಶೀಘ್ರವೇ ಹೆಚ್ಚಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ದೇಶದ ಅತಿದೊಡ್ಡ ಕಾರು ತಯಾರಕ ಮಾರುತಿ ಸುಜುಕಿ ಸಂಸ್ಥೆಯು ದೇಶೀಯ ಮಾರುಕಟ್ಟೆಯಲ್ಲಿ ಶೀಘ್ರವೇ ಕಾರುಗಳ ಬೆಲೆಯೇರಿಕೆ ಮಾಡುವುದಾಗಿ ತಿಳಿಸಿದೆ.
ಕಾರುಗಳ ತಯಾರಿಕಾ ವೆಚ್ಚದಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಈ ತಿಂಗಳು ತನ್ನ ಎಲ್ಲಾ ಮಾದರಿಯ ಕಾರುಗಳ ಬೆಲೆಗಳನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಆದಾಗ್ಯೂ, ಕಾರುಗಳ ಬೆಲೆ ಯಾವ ಪ್ರಮಾಣದಲ್ಲಿ ಏರಿಕೆ ಕಾಣಲಿದೆ ಎಂಬ ಮಾಹಿತಿಯನ್ನು ಕಂಪನಿಯು ಬಹಿರಂಗಪಡಿಸಿಲ್ಲ. ಈಗಾಗಲೇ, ವಿವಿಧ ವಾಹನ ತಯಾರಕರು ತಮ್ಮ ಉತ್ಪನ್ನಗಳ ಬೆಲೆಯನ್ನು ಈ ತಿಂಗಳಿನಿಂದ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.
ಉತ್ಪಾದನಾ ವೆಚ್ಚ ಸರಿದೂಗಿಸಲು ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆಯು ಸಹ ತನ್ನ ಎಲ್ಲಾ ಶ್ರೇಣಿಯ ಕಾರುಗಳ ಬೆಲೆಗಳನ್ನು ಏಪ್ರಿಲ್ 1 ರಿಂದ ಶೇ.4 ರಷ್ಟು ಹೆಚ್ಚಿಸಿದೆ.
ಅದೇ ರೀತಿ, ಬಿಎಂಡಬ್ಲ್ಯು ಇಂಡಿಯಾ ಈ ತಿಂಗಳಿನಿಂದ ತನ್ನ ಕಾರುಗಳ ಬೆಲೆಯನ್ನು ಶೇಕಡಾ 3.5 ರಷ್ಟು ಹೆಚ್ಚಿಸಿದೆ. ಇತರ ಐಷಾರಾಮಿ ಕಾರು ತಯಾರಕರಾದ ಆಡಿ ಮತ್ತು ಮರ್ಸಿಡಿಸ್-ಬೆನ್ಜ್ ಕೂಡ ಏಪ್ರಿಲ್ 1 ರಿಂದ ಬೆಲೆಗಳನ್ನು ಹೆಚ್ಚಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!