ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರೈಲಿನಲ್ಲಿ ಪ್ರಯಾಣಿಸುವಾಗ ಮಾಸ್ಕ್ ಕಡ್ಡಾಯ: ಮಾಸ್ಕ್ ಹಾಕದಿದ್ರೆ 500 ರೂ. ದಂಡ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ನಿಯಂತ್ರಣಕ್ಕೆ ಭಾರತೀಯ ರೈಲ್ವೆ ಇಲಾಖೆ ಕೂಡ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ರೈಲ್ವೆ ನಿಲ್ದಾಣದ ಆವರಣದಲ್ಲಿ ಮಾಸ್ಕ್ ಕಡ್ಡಾಯವಾಗಿದೆ. ರೈಲಿನಲ್ಲಿ ಪ್ರಯಾಣಿಸುವಾಗ ಮತ್ತು ರೈಲು ನಿಲ್ದಾಣದ ಆವರಣದಲ್ಲಿ ಮಾಸ್ಕ್ ಧರಿಸದವರಿಗೆ 500 ರೂ. ದಂಡ ವಿಧಿಸಲು ಇಲಾಖೆ ನಿರ್ಧರಿಸಿದೆ.

ಮುಂದಿನ ಆರು ತಿಂಗಳವರೆಗೂ ಈ ರೂಲ್ಸ್ ಜಾರಿಯಲ್ಲಿರಲಿದೆ. ಕೋವಿಡ್-19 ಸಾಂಕ್ರಾಮಿಕ ಮತ್ತು ಸಂಬಂಧಪಟ್ಟ ಸ್ವಚ್ಛತೆಗೆ ಸಂಬಂಧಿಸಿದಂತೆ ರೈಲ್ವೆಗಳಲ್ಲಿ ಬೇಯಿಸಿದ ಆಹಾರದ ಬದಲಿಗೆ ಸಿದ್ಧಪಡಿಸಿದ ಪ್ಯಾಕೇಜ್ ಮಾಡಿದ ಆಹಾರ ನೀಡಲು ಮಾರ್ಗಸೂಚಿ ಹೊರಡಿಸಲಾಗಿದೆ. ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಮತ್ತು ಟೇಕ್ ಎವೆ ಕಿಟ್ ವಸ್ತುಗಳು ಮಾರಾಟಕ್ಕೆ ಸಿಗುವಂತೆ ಮಾಡಲಾಗಿದೆ, ರೈಲ್ವೆ ಸ್ಟೇಷನ್ ಗಳಲ್ಲಿ ಬಹೂಪಯೋಗಿ ಸ್ಟಾಲ್ ಗಳನ್ನು ಇಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss