Friday, September 12, 2025

ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಜಾಮೀನು: ಮಂಗಳವಾರಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ದೂರುದಾರ ಚಿನ್ನಯ್ಯನ ಜಾಮೀನು ಅರ್ಜಿ ತೀರ್ಪನ್ನು ನ್ಯಾಯಾಲಯ ಸೆ.16ಕ್ಕೆ ಕಾಯ್ದಿರಿಸಿದೆ.

ಚಿನ್ನಯ್ಯ ಪರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿ ಶುಕ್ರವಾರ ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ ವ್ಯಾವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂತು. ಈ ಸಂದರ್ಭ ಎಸ್‌ಐ ಟಿ ಪರ ವಕೀಲರಿಂದ ಜಾಮೀನು ನೀಡಲು ಕಾನೂನು ಹಾಗೂ ತನಿಖಾ ಹಂತ ಆಧರಿಸಿ ಆಕ್ಷೇಪಣೆ ಸಲ್ಲಿಕೆ ಮಾಡಿದರು. ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆದೇಶ ಕಾಯ್ದಿರಿಸಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತುಹಾಕಿದ್ದೇನೆ ಎಂಬ ಚಿನ್ನಯ್ಯನ ದೂರಿನ ಹಿನ್ನೆಲೆಯಲ್ಲಿ ಈಗಾಗಲೇ ಎಸ್‌ಐಟಿ ಸಮಾಧಿ ಶೋಧ ನಡೆಸಿದ್ದು, ಅದಾದ ಬಳಿಕ ಆತನನ್ನು ಆರೋಪಿಯಾಗಿಸಿ ತಮ್ಮ ಕಸ್ಟಡಿಗೆ ಪಡೆದು ಬಂಧಿಸಿತ್ತು. ಇದಾದ ಬಳಿಕ ನ್ಯಾಯಾಲಯ ಚಿನ್ನಯ್ಯಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇದನ್ನೂ ಓದಿ