ರಾಜ್ಯದಲ್ಲಿ 26 ಜನರಲ್ಲಿ ಹೆಚ್​3ಎನ್2 ಸೋಂಕು ಪತ್ತೆ : ಆರೋಗ್ಯ ಸಿಬ್ಬಂದಿಗೆ ಇಂದಿನಿಂದ ಮಾಸ್ಕ್‌ ಕಡ್ಡಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದಲ್ಲಿ 26 ಜನರಲ್ಲಿ ಹೆಚ್​3ಎನ್2(H3N2) ಸೋಂಕು ಪತ್ತೆಯಾಗಿದ್ದು, ಇಂದಿನಿಂದ ಎಲ್ಲಾ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಆರೋಗ್ಯ ಸಚಿವ ಕೆ.ಸುಧಾಕರ್‌ ಸೂಚನೆ ನೀಡಿದರು.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, H3N2 ಸೋಂಕಿನ ಪ್ರಕರಣಗಳು ದೇಶದಲ್ಲಿ ಹೆಚ್ಚಳವಾಗಿದೆ. ಅನೇಕರು ಗಾಬರಿಯಾಗಿದ್ದಾರೆ, ಹೀಗಾಗಿ ಉನ್ನತ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ಮಾಡಿದೆವು. ಗಾಬರಿಯಾಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಎಂದರು.

ಹೆಚ್​3ಎನ್2 ಸೋಂಕಿನಿಂದ 15 ವರ್ಷದ ಒಳಗಿನ ಮಕ್ಕಳಿಗೆ ಹೆಚ್ಚು ಅಪಾಯವಿದೆ. 60 ವರ್ಷ ಮೆಲ್ಪಟ್ಟವರಿಗೂ ಇದು ಸುಲಭವಾಗಿ ಹರಡುತ್ತದೆ. ಹಾಗಾಗಿ ಗರ್ಭಿಣಿಯರು ಹೆಚ್ಚು ಎಚ್ಚರಿಕೆ ವಹಿಸಬೇಕು. ರಾಜ್ಯದ ಜನರು ಹೆಚ್ಚು ಕಾಳಜಿ ವಹಿಸಬೇಕು. ಸೀನುವಾಗ ಕೆಮ್ಮುವಾಗ ಮುನ್ನೇಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದರು.

ರಾಜ್ಯದಲ್ಲಿ ಹೆಚ್​3ಎನ್2 ಆತಂಕ ಹಿನ್ನೆಲೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಹೆಚ್​3ಎನ್2 ಸೋಂಕು ನಿಯಂತ್ರಣ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಜ್ಞರು, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ತಾಂತ್ರಿಕ ಸಲಹಾ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ ಒಟ್ಟು 60 ಅಡೆನಾಯ್ಡ್ ವೈರಸ್ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ 6 ತಿಂಗಳಿನಿಂದ ಆರೋಗ್ಯ ಸಿಬ್ಬಂದಿಗಳು ಮಾಸ್ಕ್ ಧರಿಸುತ್ತಿಲ್ಲ. ಹೀಗಾಗಿ ಇಂದಿನಿಂದಲೇ ರಾಜ್ಯದ ಆರೋಗ್ಯ ಇಲಾಖೆ ಹಾಗೂ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಮಾಸ್ಕ್ ಹಾಕಿಕೊಳ್ಳಬೇಕು. ಬೆಂಗಳೂರಿನಲ್ಲಿ ಹೆಚ್​3ಎನ್2 ಎರಡು ​ಪ್ರಕರಣಗಳು ಪತ್ತೆಯಾಗಿವೆ. ಜನವರಿ ಯಿಂದ ಮಾರ್ಚ್​ವರೆಗೆ 20 H1N1 ಪ್ರಕರಣಗಳು ಪತ್ತೆಯಾಗಿವೆ. ಅಡಿನಾಯ್ಡ್ ವೈರಸ್ ಜಾಸ್ತಿ ಆಗಿದೆ. ಹಾಗಾಗಿ ಮುನ್ನೆಚ್ಚರಿಕೆ ವಹಿಸಲಾಗಿದೆ. ರಾಜ್ಯದಲ್ಲಿ ಔಷಧಿಯ ಕೊರತೆ ಇಲ್ಲ. ಬೇಸಿಗೆಯಲ್ಲಿ ತಾಪಮಾನ ಹೆಚ್ಚಾಗಿರುತ್ತೆ. ಹೀಗಾಗಿ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!