ಕಾಸರಗೋಡು ಸಹಿತ ಎಲ್ಲ ಜಿಲ್ಲೆಗಳಲ್ಲಿ ಮಾಸ್ಕ್ ಕಡ್ಡಾಯ: ಕೇರಳ ಸರಕಾರ ಆದೇಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇರಳ ಕೊರೋನಾ ಮುಂಜಾಗ್ರತಾ ಭಾಗವಾಗಿ ಸರ್ಕಾರವು ಕಾಸರಗೋಡು ಸಹಿತ ಎಲ್ಲ ಜಿಲ್ಲೆಗಳಲ್ಲಿ ಮಾಸ್ಕ್ (Mask) ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ ಸಮಾರಂಭಗಳಲ್ಲಿ ಜನರು ಮಾಸ್ಕ್ ಧರಿಸುವುದನ್ನು ಕಡ್ಡಾಯ ಗೊಳಿಸಲಾಗಿದೆ. ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರ ಜನರಿಗೆ ತನ್ನ ಆದೇಶದಲ್ಲಿ ತಿಳಿಸಿದೆ.

ಅದೇ ರೀತಿ ಜನರಿಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲು ಸರ್ಕಾರ ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ನಿರ್ದೇಶನ ನೀಡಿದೆ. ಕೋವಿಡ್ ಹೆಚ್ಚಳದ ಆತಂಕದ ನಡುವೆ ಹೊರಡಿಸಲಾದ ಈ ಆದೇಶ ಮುಂದಿನ 30 ದಿನಗಳವರೆಗೆ ಕೇರಳ ರಾಜ್ಯದ ಎಲ್ಲಾ ಭಾಗಗಳಲ್ಲೂ ಜಾರಿಯಲ್ಲಿರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!