ದೆಹಲಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ನಿಯಮ ಉಲ್ಲಂಘಿಸಿದರೆ 500 ರೂ ದಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸರ್ಕಾರ ಮತ್ತೆ ನಿಯಮಗಳನ್ನು ಜಾರಿಗೆ ತಂದಿದೆ. ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂಬ ನಿಯಮವನ್ನು ವಿಧಿಸಲಾಗಿದೆ. ಗುರುವಾರ (ಆಗಸ್ಟ್ 11, 2022), ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿ ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಈ ನಿಯಮ ಉಲ್ಲಂಘಿಸಿದರೆ ರೂ.500 ದಂಡ ತೆರಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಖಾಸಗಿ ಕಾರು ಮತ್ತು ವ್ಯಾನ್‌ಗಳಲ್ಲಿ ಪ್ರಯಾಣಿಸುವವರಿಗೆ ಈ ನಿಬಂಧನೆ ಅನ್ವಯಿಸುವುದಿಲ್ಲ. ಕಳೆದ ಕೆಲವು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಬಗ್ಗೆ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದರು. ಹಾಗಾಗಿ ಮಾಸ್ಕ್‌ಗಳನ್ನು ಕಡ್ಡಾಯವಾಗಿ ನೀಡುವ ಬಗ್ಗೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ದೆಹಲಿಯಲ್ಲಿ ಬುಧವಾರ 2,146 ಹೊಸ ಕರೋನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಪಾಸಿಟಿವಿಟಿ ದರ ಶೇ.17.83ಕ್ಕೆ ಏರಿಕೆಯಾಗಿದ್ದು, ಎಂಟು ಜನ ಸಾವಿಗೀಡಾಗಿದ್ದಾರೆ. ಆರು ತಿಂಗಳಲ್ಲೇ ಇದು ಗರಿಷ್ಠ ಮಟ್ಟದ ಏರಿಕೆ. ಗುರುವಾರವೂ ದೆಹಲಿಯಲ್ಲಿ 2,495 ಹೊಸ ಪ್ರಕರಣಗಳು ದಾಖಲಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!