ಮಹಾರಾಷ್ಟ್ರ ಬಳಿಕ ಈ ರಾಜ್ಯದಲ್ಲೂ ಇಂದಿನಿಂದ ಮಾಸ್ಕ್ ಬಳಕೆ ಕಡ್ಡಾಯವಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕೊರೋನಾ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿರುವ ಹಿನ್ನೆಲೆ ಮಹಾರಾಷ್ಟ್ರ ಸರಕಾರದ ಬಳಿಕ ಉತ್ತರ ಪ್ರದೇಶದಲ್ಲೂ ಇಂದಿನಿಂದ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದು ಘೋಷಿಸಿದೆ.
ಈ ಮೂಲಕ ಸಿಎಂ ಯೋಗಿ ನೇತೃತ್ವದ ಸರ್ಕಾರವು ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯಿದೆ 2020 ರ ಅನುಷ್ಠಾನವನ್ನು ವಿಸ್ತರಿಸದಿರಲು ನಿರ್ಧರಿಸಿದೆ.
ಈ ಹಿಂದೆ ಕೊರೋನಾ ಸಂದರ್ಭ 2020 ,ಮೇ ತಿಂಗಳಿನಿಂದ ರಾಜ್ಯದಲ್ಲಿ ಈ ಕಾಯಿದೆ ಜಾರಿಗೆ ತರಲಾಗಿತ್ತು. ಇದೀಗ ಮಾಸ್ಕ್ ಧರಿಸದಿರುವುದು ಇನ್ನು ಮುಂದೆ ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್, ‘ಸಾರ್ವಜನಿಕ ಆರೋಗ್ಯ ಮತ್ತು ಸಾಂಕ್ರಾಮಿಕ ಕಾಯ್ದೆ ನಿಬಂಧನೆಗಳು ಮಾರ್ಚ್ 31 ರವರೆಗೆ ಜಾರಿಯಲ್ಲಿದ್ದ ಮತ್ತು ಪ್ರಸ್ತುತ ಸನ್ನಿವೇಶವನ್ನು ಪರಿಗಣಿಸಿ,ಮಾಸ್ಕ್ ಕಡ್ಡಾಯ ನಿಯಮವನ್ನು ವಿಸ್ತರಿಸದಿರಲು ನಿರ್ಧರಿಸಲಾಗಿದೆ.ಈ ಮೂಲಕ ಇನ್ಮುಂದೆ ಮಾಸ್ಕ್ ಧರಿಸದಿರುವುದು ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ಹೇಳಿದರು.
ಆದಾಗ್ಯೂ, ಮಾಸ್ಕ್ ಕಡ್ಡಾಯವಲ್ಲವಾಗಿದ್ದರೂ ಜನರು ತಮ್ಮ ಸುರಕ್ಷಣೆಗೆ ಸ್ವಯಂಪ್ರೇರಿತವಾಗಿದ್ದರೂ, ಮುಖವಾಡಗಳನ್ನು ಧರಿಸಬೇಕು ಮತ್ತು ಮುನ್ನೆಚ್ಚರಿಕೆ ಕ್ರಮಗಳಾಗಿ ಸಾಮಾಜಿಕ ದೂರವನ್ನು ಮುಂದುವರಿಸಲು ಪ್ರಯತ್ನಿಸಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!