ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿವಿ ಪರೀಕ್ಷೆಯಲ್ಲಿ ಮಾಸ್​ ಕಾಪಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದ ಎಂಎ ಮತ್ತು ಎಂಬಿಎ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಪುಸ್ತಕ ನೋಡಿಕೊಂಡು ಬರೆದಿದ್ದಾರೆ ಎನ್ನುವ ಆರೋಪ ಎದುರಾಗಿದೆ.

ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಮುಕ್ತವಾಗಿಯೇ ಸಾಮೂಹಿಕವಾಗಿ ನಕಲು ಮಾಡಿ ಪರೀಕ್ಷೆ ಬರೆದಿದ್ದಾರೆ.  ಬಕ್ಸಾರ್‌ನ ಮಹರ್ಷಿ ವಿಶ್ವಾಮಿತ್ರ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ತಲಾ ಒಬ್ಬ ವಿದ್ಯಾರ್ಥಿಯಿಂದ ಮೂರು ಸಾವಿರ ರೂಪಾಯಿ ಹಣ ಪಡೆದು ಬಹಿರಂಗವಾಗಿ ಕಾಪಿ ಮಾಡಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಮಹರ್ಷಿ ವಿಶ್ವಾಮಿತ್ರ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪುಸ್ತಕ ತೆರೆದು ಬಹಿರಂಗವಾಗಿ ನಕಲು ಮಾಡುತ್ತಿದ್ದರೆ, ಪರಿವೀಕ್ಷಕರು ಪರೀಕ್ಷಾ ಕೊಠಡಿಯೊಳಗೆ ಆರಾಮವಾಗಿ ಅಲ್ಲಿಯೇ ಓಡಾಡುತ್ತಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!