ಗಾಜಾದ ಆಸ್ಪತ್ರೆಯಲ್ಲಿ ಸಾಮೂಹಿಕ ಸಮಾಧಿ, 200ಕ್ಕೂ ಅಧಿಕ ಶವಗಳು ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಗಾಜಾದ ಆಸ್ಪತ್ರೆಯೊಂದರಲ್ಲಿ 200ಕ್ಕೂ ಅಧಿಕ ಶವಗಳು ಪತ್ತೆಯಾಗಿವೆ. ಭೂಮಿ ಅಗೆಯುತ್ತಿದ್ದಷ್ಟೂ ಶವಗಳು ಪತ್ತೆಯಾಗುತ್ತಲೇ ಇವೆ.

Nearly 200 bodies found in mass grave at hospital in Gaza’s Khan Younisಪ್ಯಾಲೆಸ್ತೀನ್ ನಾಗರಿಕ ರಕ್ಷಣಾ ಸಿಬ್ಬಂದಿ ಗಾಜಾದ ಖಾನ್ ಯೂನಿಸ್​ನಲ್ಲಿರುವ ನಾಸರ್ ಮೆಡಿಕಲ್ ಕಾಂಪ್ಲೆಕ್ಸ್​ನಲ್ಲಿ ಸಾಮೂಹಿಕ ಸಮಾಧಿ ಇರುವುದನ್ನು ಪತ್ತೆಹಚ್ಚಿದ್ದಾರೆ. ಇಸ್ರೇಲ್​ ಆರು ತಿಂಗಳಿಗಿಂತ ಹೆಚ್ಚು ಕಾಲ ಗಾಜಾದ ಮೇಲೆ ನಿರಂತರ ದಾಳಿ ನಡೆಸಿತ್ತು. ಇವರೆಲ್ಲರೂ ಈ ವೇಳೆ ಮೃತಪಟ್ಟಿದ್ದು, ಸಾಮೂಹಿಕ ಸಮಾಧಿ ಮಾಡಿರಬಹುದು ಎನ್ನಲಾಗಿದೆ.

Gaza's death toll now exceeds 30,000. Here's why it's an incomplete count |  GBHಬಳಿಕ ಎಲ್ಲೆಡೆ ರಕ್ಷಣಾ ಸಿಬ್ಬಂದಿಗಳು ಜನರನ್ನು ಹುಡುಕುವ ಪ್ರಯತ್ನವನ್ನು ಮುಂದುವರೆಸಿದ್ದಾರೆ, ಆಗ 200ಕ್ಕೂ ಅಧಿಕ ಶವಗಳು ಪತ್ತೆಯಾಗಿವೆ. ಇವುಗಳಲ್ಲಿ ಮಕ್ಕಳು, ಯುವಕರು , ಮಹಿಳೆಯರು ಕೂಡ ಸೇರಿದ್ದಾರೆ.ಇಸ್ರೇಲ್​ ಗಾಜಾ ಮೇಲೆ ನಡೆಸಿದ ದಾಳಿಯಲ್ಲಿ 34,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರು ಪ್ರಾಣ ಕಳೆದುಕೊಂಡಿದ್ದಾರೆ. ಗಾಜಾದ ಎರಡು ದೊಡ್ಡ ನಗರಗಳನ್ನು ಧ್ವಂಸಗೊಳಿಸಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!