ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಂಡತಿಯ ಜೊತೆ ಜಗಳವಾಡಿದ ಸಿಟ್ಟಿನಲ್ಲಿ ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಎಂಟು ಮಂದಿಯನ್ನು ಹತ್ಯೆ ಮಾಡಿದ್ದಾನೆ.
ಮಧ್ಯಪ್ರದೇಶದಲ್ಲಿ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಮಹುಲ್ಜಿರ್ ಪೊಲೀಸ್ ಠಾಣೆ ವ್ಯಾಪ್ತಿಯ ಬೋದಲ್ ಕಚಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಪೊಲೀಸರ ಪ್ರಕಾರ ಆರೋಪಿ ಮಾನಸಿಕ ಅಸ್ವಸ್ಥ ಎಂದು ವರದಿಯಾಗಿದೆ. ಆತ ಯಾವುದಾದರೂ ಮಾದಕ ವ್ಯಸನಿಯಾಗಿದ್ದನೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಎಂಟು ಮಂದಿಯನ್ನು ಕೊಚ್ಚಿ ಕೊಲೆ ಮಾಡಿದ ನಂತರ ಆತನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಎಸ್ಪಿ ಮನೀಶ್ ಖತ್ರಿ ನೇತೃತ್ವದ ಪೊಲೀಸರು ಘಟನಾ ಸ್ಥಳದಿಂದ ಕೊಡಲಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಭೀಕರ ಕೃತ್ಯದ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ವ್ಯಕ್ತಿ ಇತ್ತೀಚೆಗೆ ಮದುವೆಯಾಗಿದ್ದ ಎನ್ನಲಾಗಿದೆ. ಕುಟುಂಬದ ಒಂದು ಮಗು ದಾಳಿಯಿಂದ ಪಾರಾಗಿ ಪೊಲೀಸರಿಗೆ ಮಾಹಿತಿ ನೀಡಿದೆ. ಪೊಲೀಸರು ಬರುವಷ್ಟ್ರಲ್ಲಿ ಮನೆಯಲ್ಲಿ ಒಂಬತ್ತು ಹೆಣಗಳು ಬಿದ್ದಿತ್ತು ಎನ್ನಲಾಗಿದೆ.