ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಒಳಗಡೆ ಕೆಲ ಮುಸ್ಲಿಮರು ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಮಾಜ್ ಮಾಡಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರು ವಿಮಾನ ನಿಲ್ದಾಣದ ಒಳಗಡೆ ನಮಾಜ್ ಮಾಡಲು ಅನುಮತಿ ಇದ್ಯಾ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ಪ್ರಶ್ನಿಸಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸುತ್ತದೆ. ಆದರೆ ಅತ್ಯಂತ ಭದ್ರತಾ ಪ್ರದೇಶವಾದ ಏರ್‌ಪೋರ್ಟ್‌ನಲ್ಲಿ ನಮಾಜ್ ಮಾಡೋದು ಸರಿಯೇ? ಸಿಎಂ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ್ ಖರ್ಗೆ ಅನುಮತಿ ಕೊಟ್ಟಿದ್ದೀರಾ? ಆರ್‌ಎಸ್‌ಎಸ್ ಪಥಸಂಚಲನ ವಿರೋಧಿಸುವ ಸರ್ಕಾರ ನಮಾಜ್ ಮಾಡಲು ಬಿಟ್ಟಿದ್ದೇಕೆ? ಕಾಂಗ್ರೆಸ್ ನಮಾಜ್ ಮಾಡುವುದನ್ನು ಕಂಡು ಕಾಣದಂತೆ ಕುಳಿತಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.
ಈ ವ್ಯಕ್ತಿಗಳು ಹೆಚ್ಚಿನ ಭದ್ರತೆಯ ವಿಮಾನ ನಿಲ್ದಾಣ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ? ಸಂಬಂಧಿತ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರ ಆರ್‌ಎಸ್‌ಎಸ್ ಪಾಠ ಸಂಚಾಲನೆ ನಡೆಸಿದಾಗ ಸರ್ಕಾರ ಏಕೆ ಆಕ್ಷೇಪಿಸುತ್ತದೆ, ಆದರೆ ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ಅಂತಹ ಚಟುವಟಿಕೆಗಳಿಗೆ ಕಣ್ಣು ಮುಚ್ಚುತ್ತದೆ? ಇದು ಅಂತಹ ಸೂಕ್ಷ್ಮ ವಲಯದಲ್ಲಿ ಗಂಭೀರ ಭದ್ರತಾ ಕಾಳಜಿಯನ್ನು ಉಂಟುಮಾಡುವುದಿಲ್ಲವೇ ಎಂದು ಕೇಳಿದ್ದಾರೆ.

