Sunday, December 10, 2023

Latest Posts

ಅಮೆರಿಕ: ಗುಂಡೇಟಿಗೆ 22 ಮಂದಿ ಸಾವು, 60ಕ್ಕೂ ಹೆಚ್ಚು ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ನಾಗರೀಕರು ಗಾಯಗೊಂಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಬುಧವಾರ ರಾತ್ರಿ 8.30ಕ್ಕೆ ಮೈನೆ ರಾಜ್ಯದ ಲೆವಿಸ್ಟನ್ ನಗರದಲ್ಲಿ ಈ ದುರಂತ ಘಟನೆ ನಡೆದಿದೆ. ದಾಳಿಕೋರ ತಲೆಮರೆಸಿಕೊಂದ್ದು, ಪೊಲೀಸರು ತೀವ್ರ ಹುಡುಕಾಟದಲ್ಲಿದ್ದಾರೆ.

ಇನ್ನೂ ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಆಂಡ್ರೊಸ್ಕೊಗಿನ್ ಕೌಂಟಿ ಶೆರಿಫ್‌ನ ಪೊಲೀಸ್ ಕಚೇರಿಯು ಶಂಕಿತನ ಎರಡು ಫೋಟೋಗಳನ್ನು ತಮ್ಮ ಫೇಸ್‌ಬುಕ್ ಪುಟದಲ್ಲಿ ಬಿಡುಗಡೆ ಮಾಡಿದೆ. ಫೋಟೋದಲ್ಲಿ, ಉದ್ದನೆಯ ತೋಳಿನ ಶರ್ಟ್ ಮತ್ತು ಜೀನ್ಸ್ ಧರಿಸಿರುವ ಗಡ್ಡಧಾರಿ ವ್ಯಕ್ತಿಯೊಬ್ಬ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ.

ಜನರು ಬಾಗಿಲು ಮುಚ್ಚಿ ತಮ್ಮ ಮನೆಗಳಲ್ಲಿಯೇ ಇರುವಂತೆ ಮೈನೆ ಸಾರ್ವಜನಿಕ ಸುರಕ್ಷತೆ ಇಲಾಖೆ ವಕ್ತಾರರು ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!