Wednesday, June 7, 2023

Latest Posts

ಮನೆಯೊಂದರಲ್ಲಿ ಸಾಮೂಹಿಕ ಗುಂಡಿನ ದಾಳಿ: ಒಂದೇ ಕುಟುಂಬದ ಹತ್ತು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದಕ್ಷಿಣ ಆಫ್ರಿಕಾದ ಮನೆಯೊಂದರಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಒಂದೇ ಕುಟುಂಬದ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ ಏಳು ಮಂದಿ ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೂರ್ವ ಕ್ವಾಝುಲು-ನಟಾಲ್ ಪ್ರಾಂತ್ಯದ ಪೀಟರ್‌ಮರಿಟ್ಜ್‌ಬರ್ಗ್ ನಗರದ ಮನೆಯಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಗುಂಡಿನ ದಾಳಿ ನಡೆದಿದೆ. ಗುರುವಾರ ರಾತ್ರಿ ಅಥವಾ ಶುಕ್ರವಾರ ಮುಂಜಾನೆ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!