ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಗೆ ಬಂಪರ್ ಗಿಫ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಕೇಶ್- ನೀತಾ ಅಂಬಾನಿ ದಂಪತಿಯ ಪುತ್ರ ಅನಂತ್ ಅಂಬಾನಿ ಅವರ ಮದುವೆ ಅದ್ದೂರಿಯಾಗಿ ರಾಧಿಕಾ ಮರ್ಚೆಂಟ್ ಜೊತೆಗೆ ಜುಲೈ 12ರಂದು ನಡೆಯಲಿದೆ.

ಅದಕ್ಕೂ ಮುನ್ನ ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮುಂಬೈನಿಂದ 100 ಕಿಮೀ ದೂರದಲ್ಲಿರುವ ಪಾಲ್ಘರ್ ಪ್ರದೇಶದಲ್ಲಿನ ಐವತ್ತಕ್ಕೂ ಹೆಚ್ಚು ಜೋಡಿಗಳಿಗೆ, ಅದರಲ್ಲೂ ಆರ್ಥಿಕವಾಗಿ ಹಿಂದುಳಿದಂಥ ವಧು- ವರರಿಗೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ವಿವಾಹ ಸಮಾರಂಭವದಲ್ಲಿ ಈ ನೂತನ ದಂಪತಿಗಳ ಕುಟುಂಬದ ಪರವಾಗಿ ಸುಮಾರು 800 ಜನರು ಭಾಗವಹಿಸಿದ್ದರು.

ನೀತಾ ಅಂಬಾನಿ ಮತ್ತು ಮುಖೇಶ್ ಅಂಬಾನಿ, ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ, ಇಶಾ ಅಂಬಾನಿ ಮತ್ತು ಆನಂದ್ ಪಿರಮಾಳ್ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನೀತಾ ಅಂಬಾನಿ ಮತ್ತು ಮುಖೇಶ್ ಅಂಬಾನಿ, ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ, ಇಶಾ ಅಂಬಾನಿ ಮತ್ತು ಆನಂದ್ ಪಿರಮಾಳ್ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅನಂತ್- ರಾಧಿಕಾ ಮದುವೆಗೆ ಇದು ಆರಂಭಿಕ ಕಾರ್ಯಕ್ರಮವಾಗಿದ್ದು, ಮುಂದಿನ ಮದುವೆ ಋತುವಿನಲ್ಲಿ ದೇಶದಾದ್ಯಂತ ಈ ರೀತಿಯಾಗಿ ನೂರಕ್ಕೂ ಹೆಚ್ಚು ವಿವಾಹಗಳಿಗೆ ಅಂಬಾನಿ ಕುಟುಂಬದ ಬೆಂಬಲ ದೊರೆಯಲಿದೆ. ಈ ಬಗ್ಗೆ ಸಂಕಲ್ಪವನ್ನೇ ಮಾಡಿಕೊಂಡಿದ್ದಾರೆ.

ಥಾಣೆಯ ರಿಲಯನ್ಸ್ ಕಾರ್ಪೊರೇಟ್ ಪಾರ್ಕ್‌ನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮವು ದಂಪತಿಗಳ ಕುಟುಂಬಗಳನ್ನು ಪ್ರತಿನಿಧಿಸುವ ಸುಮಾರು 800 ಜನರ ಸಮ್ಮುಖದಲ್ಲಿ ನಡೆಯಿತು.

ಮುಂಬೈನಲ್ಲಿ ನಡೆದ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಮತ್ತು ಮುಕೇಶ್ ಅಂಬಾನಿ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡಿದ್ದರು ಮತ್ತು ನವ ವಿವಾಹಿತ ಜೋಡಿಗಳಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು.

ಈ ಸಾಮೂಹಿಕ ವಿವಾಹ ಸಂದರ್ಭದಲ್ಲಿ ಪ್ರತಿ ಜೋಡಿಗೂ ಮಂಗಳಸೂತ್ರ, ಮದುವೆಯ ಉಂಗುರ, ಮೂಗುತಿ ಸೇರಿದಂತೆ ಚಿನ್ನಾಭರಣಗಳನ್ನು ನೀಡಲಾಯಿತು. ಜೊತೆಗೆ ಕಾಲುಂಗುರ, ಕಾಲ್ಗೆಜ್ಜೆಯಂಥ ಬೆಳ್ಳಿ ಆಭರಣಗಳನ್ನು ಸಹ ನೀಡಲಾಯಿತು.

ಈ ಸಾಮೂಹಿಕ ವಿವಾಹ ಸಂದರ್ಭದಲ್ಲಿ ಪ್ರತಿ ಜೋಡಿಗೂ ಮಂಗಳಸೂತ್ರ, ಮದುವೆಯ ಉಂಗುರ, ಮೂಗುತಿ ಸೇರಿದಂತೆ ಚಿನ್ನಾಭರಣಗಳನ್ನು ನೀಡಲಾಯಿತು. ಜೊತೆಗೆ ಕಾಲುಂಗುರ, ಕಾಲ್ಗೆಜ್ಜೆಯಂಥ ಬೆಳ್ಳಿ ಆಭರಣಗಳನ್ನು ಸಹ ನೀಡಲಾಯಿತು.

ಇದರ ಜತೆಗೆ ಪ್ರತಿ ವಧುವಿಗೆ ರೂ. 1.1 ಲಕ್ಷ (ಒಂದು ಲಕ್ಷದ ಒಂದು ಸಾವಿರ) ಹಣವನ್ನು ಕೂಡ ತವರು ಮನೆಯಿಂದ ನೀಡುವಂಥ ಸ್ತ್ರೀಧನದ ರೂಪದಲ್ಲಿ ಕೊಡಲಾಯಿತು. ಜೊತೆಗೆ ಪ್ರತಿ ದಂಪತಿಗೂ 1 ವರ್ಷಕ್ಕೆ ಸಾಕಾಗುವಂಥ ದಿನಸಿ, ಗೃಹೋಪಯೋಗಿ ವಸ್ತುಗಳನ್ನು ಕೊಡಲಾಯಿತು. ಈ ಗೃಹೋಪಯೋಗಿ ವಸ್ತುಗಳಲ್ಲಿ 36 ಅಗತ್ಯ ವಸ್ತುಗಳು ಮತ್ತು ಪಾತ್ರೆಗಳು, ಗ್ಯಾಸ್ ಸ್ಟೌವ್, ಮಿಕ್ಸರ್ ಮತ್ತು ಫ್ಯಾನ್, ಹಾಗೆಯೇ ಹಾಸಿಗೆ ಮತ್ತು ದಿಂಬುಗಳು ಕೂಡ ಇದ್ದವು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

5 COMMENTS

  1. ಮೋದಿ ಜೀ ಯವರಿಂದ ಸ್ಪೂರ್ತಿ,ಪರಿವರ್ತನೆ.

  2. ಮೋದೀ ಜೀ ಯವರಿಂದ ಸ್ಪೂರ್ತಿ, ಪರಿವರ್ತನೆ.

  3. Very very good. Excellent all over India 🇮🇳. Announce something for the coastal belt during erosions of the dangerous sea.

LEAVE A REPLY

Please enter your comment!
Please enter your name here

error: Content is protected !!