ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ತೂತುಕುಡಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮುತ್ತುಕಣ್ಣನ್ (21) ಮತ್ತು ವಿಜಯ್ (25) ಎಂಬ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೆಲ್ವಂ (21), ಪ್ರಶಾಂತ್ (20), ಸೆಂಧುರ್ಕನಿ (45), ಮುತ್ತುಮರಿ (41) ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬರಿಗೂ ಮುಖ್ಯಮಂತ್ರಿ 1 ಲಕ್ಷ ರೂ. ಘೋಷಿಸಿದ್ದಾರೆ.