spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

13 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅನಾಹುತ: ಬೆಂಕಿಯ ಕೆನ್ನಾಲಿಗೆಗೆ 30 ಸಾವು, 62 ಜನರಿಗೆ ಗಾಯ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಚೀನಾದ ತೈವಾನ್ ಪ್ರದೇಶದ ಕೌಹ್‌ಸಿಯುಂಗ್ ನಗರದ 13 ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, 30 ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಸಿ.ಜಿ.ಟಿ.ನ್ ಸುದ್ದಿ ಮಾಧ್ಯಮ ಮಾಹಿತಿ ನೀಡಿದ್ದು, ಗುರುವಾರ ಮುಂಜಾನೆ 2 ಗಂಟೆ ಸುಮಾರಿಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಳಗ್ಗೆ 7ರವರೆಗೆ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವೇಳೆ 30 ಮಂದಿ ಮೃತಪಟ್ಟಿದ್ದು, 62 ಜನರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಈ ಕಟ್ಟಡವನ್ನು 40 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದು, ಇದನ್ನು ವಸತಿಗೆ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ನೀಡಲಾಗಿತ್ತು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss