ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಚಮೋಲಿ ಜಿಲ್ಲೆಯ ಭೂಕುಸಿತ ಪ್ರದೇಶ ಜೋಶಿಮಠದಲ್ಲಿ ಬೃಹತ್ ಲಟ್ಟಡವೊಂದು ಧರೆಗುರುಳಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆಯಿದೆ.
ಇದೀಗಾಗಲೇ ಕಟ್ಟಡದ ಅವಶೇಷಗಳಿಂದ ಮೂವರನ್ನು ರಕ್ಷಿಸಲಾಗಿದ್ದು, ಇನ್ನೂ ಸಾಕಷ್ಟು ಮಂದಿ ಸಿಲುಕಿದ್ದಾರೆ ಎನ್ನಲಾಗಿದೆ. ಪರಿಹಾರ ಹಾಗೂ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಜನರನ್ನು ರಕ್ಷಿಸಲಾಗುತ್ತಿದೆ.
ತಡರಾತ್ರಿ ಹೆಲಾಂಗ್ ಗ್ರಾಮದಲ್ಲಿ ಕಟ್ಟಡ ಕುಸಿತ ಸಂಭವಿಸಿದ್ದು, ಹತ್ತಿರದಲ್ಲಿದ್ದ ಕ್ರಷರ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಜನರು ಈ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವಶೇಷಗಳಡಿ ಸಿಲುಕಿರುವ ಹಲವರನ್ನು ಹೊರತೆಗೆಯಲು ಪ್ರಯತ್ನ ಮುಂದುವರಿದಿದೆ. ಈ ವರ್ಷದ ಆರಂಭದಲ್ಲಿ ಜೋಶಿಮಠದಲ್ಲಿ ಏಕಾಏಕಿ ಕಟ್ಟಡಗಳು ಹಾನಿಗೊಳಗಾಗಿದ್ದವು. ಭೂಕಂಪದ ಹಾನಿಯಿಂದಾಗಿ ಸಾಕಷ್ಟು ಮನೆಗಳು ಬಿರುಕು ಬಿಟ್ಟಿದ್ದವು.