ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆದ ಭೀಕರ ಕಾರು ಬಾಂಬ್ ಸ್ಫೋಟದಲ್ಲಿ ರಷ್ಯಾದ ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವನ್ನಪ್ಪಿದ್ದಾರೆ. ಈ ಯೋಜಿತ ಹತ್ಯೆಯ ಹಿಂದೆ ಉಕ್ರೇನ್ ವಿಶೇಷ ಪಡೆಗಳ ಕೈವಾಡವಿರಬಹುದು ಎಂದು ಶಂಕಿಸಲಾಗಿದೆ.
ಫೆಬ್ರವರಿ 2022 ರಲ್ಲಿ ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿದ ನಂತರ, ರಷ್ಯಾದ ಪ್ರಭಾವಿ ವ್ಯಕ್ತಿಗಳು ಮತ್ತು ಮಿಲಿಟರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿಗಳ ಸರಣಿಗೆ ಈ ಘಟನೆ ಹೊಸ ಸೇರ್ಪಡೆಯಾಗಿದೆ.
ಈ ದಾಳಿಗಳು ರಷ್ಯಾದ ಭದ್ರತಾ ವ್ಯವಸ್ಥೆಗೆ ಸವಾಲಾಗಿದ್ದು, ಯುದ್ಧವು ಕೇವಲ ಗಡಿಭಾಗಕ್ಕೆ ಸೀಮಿತವಾಗದೆ ರಷ್ಯಾದ ಹೃದಯಭಾಗಕ್ಕೂ ತಟ್ಟುತ್ತಿರುವುದಕ್ಕೆ ಸಾಕ್ಷಿಯಾಗಿದೆ.

