ರಾಜ್ಯಾದ್ಯಂತ ಮಳೆಯಿಂದ ಅಪಾರ ಹಾನಿ: ನಾಳೆ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ (Pre-monsoon rains in Karnataka) ಯಿಂದ ಅಪಾರ ಹಾನಿಯಾಗುತ್ತಿದ್ದು, ಈ ಹಿನ್ನೆಲೆ ನಾಳೆ (ಮೇ 23) ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ.

ನಾಳೆ ಮಧ್ಯಾಹ್ನ 3ಕ್ಕೆ ವಿಧಾನಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿವಿಧ ಭಾಗಗಳಲ್ಲಿ ಮಳೆಯಿಂದ ಆದ ಅನಾಹುತಗಳ ಬಗ್ಗೆ ಮಾಹಿತಿ ಕಲೆ ಹಾಕಿಕೊಳ್ಳಲಿದ್ದಾರೆ.

ಬಂಗಾಳಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಆರಂಭವಾದ ಮಳೆ ಕರ್ನಾಟಕದಲ್ಲಿ ಅನಾಹುತಗಳನ್ನೇ ಸೃಷ್ಟಿಮಾಡಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟ ಉಂಟಾಗಿದೆ. ಕೆಲವರ ಮನೆಗಳಿಗೆ ಹಾನಿಯಾಗಿದ್ದು, ಇನ್ನೂ ಕೆಲವು ಮನೆಗಳು ಕುಸಿದುಬಿದ್ದಿವೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಲಿದ್ದಾರೆ.

ಅದಾದ ಬಳಿಕ ಸಿದ್ದರಾಮಯ್ಯ ಅವರು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ನಾಳೆ ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಅಪಾರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳ ಸಭೆ ಕರೆಯಲಾಗಿದ್ದು, ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!