ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭಂಡಾರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿರುವ ಕಾರ್ಖಾನೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಪಾರುಗಾಣಿಕಾ ಮತ್ತು ವೈದ್ಯಕೀಯ ಕಾರ್ಯಕರ್ತರು ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ಸ್ಫೋಟದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಮೃತರ ಗುರುತಿನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯ ಆರಂಭವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.