September 5, 2026
Saturday, September 5, 2026
spot_img

ದೆಹಲಿಯ CNG ಪಂಪ್‌ನಲ್ಲಿ ಭೀಕರ ಸ್ಫೋಟ: ಮೂವರು ಸಾ*ವು, ಮೂವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ದೆಹಲಿಯಲ್ಲಿ ಸಿಎನ್‌ಜಿ ತುಂಬಿಸುತ್ತಿದ್ದ ಟ್ರಕ್‌ವೊಂದು ಏಕಾಏಕಿ ಸ್ಫೋಟಗೊಂಡ ಪರಿಣಾಮ ಭೀಕರ ದುರಂತ ಸಂಭವಿಸಿದೆ. ಟಿಕ್ರಿ ಕಲಾನ್ ಪ್ರದೇಶದ ಸಿಎನ್‌ಜಿ ಪಂಪ್‌ನಲ್ಲಿ ನಡೆದ ಈ ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಮತ್ತೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಪಂಪ್ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಗ್ಯಾಸ್ ತುಂಬಿಸುವ ವೇಳೆ ಸ್ಫೋಟ

ಮಧ್ಯಾಹ್ನ ಸುಮಾರು 3.37ರ ವೇಳೆಗೆ ಸಿಎನ್‌ಜಿ ಸ್ಟೇಷನ್‌ನಲ್ಲಿ ಸ್ಫೋಟ ಸಂಭವಿಸಿದೆ. ಟ್ರಕ್‌ಗೆ ಸಿಎನ್‌ಜಿ ತುಂಬಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸ್ಫೋಟದ ವೇಳೆ ಪಂಪ್‌ನಲ್ಲಿದ್ದ ಕೆಲವರು ಗಾಯಗೊಂಡಿದ್ದಾರೆ.

ಮೂವರು ಸ್ಥಳದಲ್ಲೇ ಬಲಿ

ದೆಹಲಿ ಪೊಲೀಸರು ಮೂವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಮೃತರಲ್ಲಿ ಒಬ್ಬರನ್ನು ಮನೀಶ್ ಎಂದು ಗುರುತಿಸಲಾಗಿದ್ದು, ಉಳಿದ ಇಬ್ಬರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ. ಮೃತಪಟ್ಟವರು ಸಿಎನ್‌ಜಿ ಪಂಪ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಘಟನೆಯ ಮಾಹಿತಿ ದೊರೆತ ತಕ್ಷಣ ದೆಹಲಿ ಅಗ್ನಿಶಾಮಕ ಸೇವೆಯಿಂದ ಆರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಮತ್ತಷ್ಟು ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರು.

ಸ್ಫೋಟಕ್ಕೆ ಕಾರಣವೇನು?

ಸಿಎನ್‌ಜಿ ತುಂಬಿಸುವ ವೇಳೆ ಟ್ರಕ್‌ನ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಸಾಧ್ಯತೆ ಇದ್ದರೂ, ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಘಟನೆ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !