October 11, 2026
Sunday, October 11, 2026
spot_img

ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಭೀಕರ ಸ್ಫೋಟ: ಏಳು ಮಂದಿ ಸಜೀವ ದಹನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ಇಂದೋರ್‌ನಲ್ಲಿ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ ನಿಂದಾಗಿ ಭೀಕರ ಸ್ಫೋಟ ಸಂಭವಿಸಿದ್ದು, ಏಳು ಮಂದಿ ದುರಂತ ಅಂತ್ಯ ಕಂಡಿದ್ದಾರೆ .

ಇಲ್ಲಿನ ಬಂಗಾಳಿ ಸ್ಕ್ವೇರ್ ಬಳಿಯ ವಸತಿ ಕಟ್ಟಡದಲ್ಲಿ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ ಉಂಟಾಗಿದ್ದು, ಇದರಿಂದ ವಾಹನಗಳಿಗೆ ಬೆಂಕಿ ಹತ್ತಿಗೊಂಡಿದೆ. ಈ ವೇಳೆ ಅಲ್ಲಿಯೇ ಪಕ್ಕದಲ್ಲಿದ್ದ ಎಲ್‌ಪಿಜಿ ಸಿಲಿಂಡರ್‌ಗಳಿಗೂ ಬೆಂಕಿ ಆವರಿಸಿ ನಾಲ್ಕು ಸಿಲಿಂಡರ್ ಗಳು ಸ್ಫೋಟಗೊಂಡಿದೆ. ಇದರ ಪರಿಣಾಮ ಈ ಬೆಂಕಿಯು ಮೂರು ಅಂತಸ್ತಿನ ಮನೆಗೆ ತಗುಲಿದ್ದು, ಏಳು ಜನ ಸಜೀವ ದಹನಗೊಂಡಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಅವಘಡದ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ತೊಡಗಿಕೊಂಡರು. ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ಸಿಯಾಗಿದ್ದಾರೆ .

Must Read