ಮಧ್ಯಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಮೂವರು ಕಾರ್ಮಿಕರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಸ್ಫೋಟ ಜನರಲ್ಲಿ ಆತಂಕ ಸೃಷ್ಟಿಸಿದೆ. ಟೋಂಕ್ ಕಲಾನ್ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಿಗ್ಗೆ ಏಕಾಏಕಿ ಸ್ಫೋಟ ಸಂಭವಿಸಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಸುತ್ತಮುತ್ತ ಭಾರಿ ಹೊಗೆ ಆವರಿಸಿತ್ತು. ದೇಹದ ಅವಶೇಷಗಳು 20ರಿಂದ 25 ಅಡಿ ದೂರದವರೆಗೆ ಚಿಮ್ಮಿಬಿದ್ದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಅನೇಕರು ತೀವ್ರ ಸುಟ್ಟ ಗಾಯಗಳಿಂದ … Continue reading ಮಧ್ಯಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಮೂವರು ಕಾರ್ಮಿಕರ ದುರ್ಮ*ರಣ