ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾಚಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನದ ಅತಿದೊಡ್ಡ ವಿಮಾನ ನಿಲ್ದಾಣವಾದ ಕರಾಚಿ ವಿಮಾನ ನಿಲ್ದಾಣದ ಹೊರಗೆ ಟ್ಯಾಂಕರ್ ಸ್ಫೋಟಗೊಂಡಿದೆ ಎಂದು ಪೊಲೀಸರು ಮತ್ತು ಪ್ರಾಂತೀಯ ಸರ್ಕಾರ ತಿಳಿಸಿದೆ.
ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು. ಅಪಘಾತದ ಸ್ಥಳದಲ್ಲಿ ಭಾರೀ ಸೇನಾಪಡೆ ನಿಯೋಜಿಸಲಾಗಿದೆ. ವಿದೇಶಿಯರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಆಂತರಿಕ ಸಚಿವಾಲಯದ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನಾಗರಿಕ ವಿಮಾನಯಾನ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ರಾಹತ್ ಹುಸೇನ್, ಸ್ಫೋಟದ ಶಬ್ದವು ವಿಮಾನ ನಿಲ್ದಾಣದ ಕಟ್ಟಡವನ್ನು ಅಲುಗಾಡಿಸುವಷ್ಟು ಜೋರಾಗಿತ್ತು ಎಂದು ತಿಳಿಸಿದ್ದಾರೆ.
ಗಾಯಾಳುಗಳ ಬಗ್ಗೆ ಮಾತನಾಡಿದ ಪೊಲೀಸ್ ಸರ್ಜನ್ ಡಾ.ಸುಮಯ್ಯ ತಾರಿಕ್, ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಮತ್ತು ಅವರಲ್ಲಿ ನಾಲ್ವರು ಭದ್ರತಾ ಸಿಬ್ಬಂದಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.