September 26, 2026
Saturday, September 26, 2026
spot_img

ಕತಾರ್ ನೈಸರ್ಗಿಕ ಅನಿಲ ಕೇಂದ್ರದಲ್ಲಿ ಭಾರೀ ಸ್ಫೋಟ, 18 ಮಂದಿ ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕತಾರ್‌ನ ಪ್ರಮುಖ ನೈಸರ್ಗಿಕ ಅನಿಲ ರಫ್ತು ಕೇಂದ್ರವಾದ ರಾಸ್ ಲಾಫನ್ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಭಾರೀ ಸ್ಫೋಟ ಸಂಭವಿಸಿದ್ದು, 54 ಮಂದಿ ಗಾಯಗೊಂಡಿದ್ದು, 18 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇರಾನ್ ಯುದ್ಧದ ಸಂದರ್ಭದಲ್ಲಿ ನಡೆಸಿದ ದಾಳಿಯ ಬಳಿಕ ಸ್ಥಗಿತಗೊಂಡಿದ್ದ ಅನಿಲ ರಫ್ತು ಕಾರ್ಯಾಚರಣೆಯನ್ನು ಪುನರಾರಂಭಿಸಲು ಕಾರ್ಮಿಕರು ಪ್ರಯತ್ನಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಫೋಟದ ಪರಿಣಾಮವಾಗಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.

ವಿಶ್ವದ ಅಗ್ರ ನೈಸರ್ಗಿಕ ಅನಿಲ ಉತ್ಪಾದಕ ರಾಷ್ಟ್ರಗಳಲ್ಲಿ ಒಂದಾದ ಕತಾರ್‌ನ ಈ ಪ್ರಮುಖ ಕೇಂದ್ರದಲ್ಲಿ ಸಂಭವಿಸಿದ ಸ್ಫೋಟ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಮತ್ತಷ್ಟು ಅನಿಶ್ಚಿತತೆ ಉಂಟುಮಾಡುವ ಸಾಧ್ಯತೆಯಿದೆ.

Must Read