ಅಫ್ಘಾನಿಸ್ತಾನದ ಬಾಲ್ಖ್ ಪ್ರಾಂತ್ಯದಲ್ಲಿ ಭಾರೀ ಸ್ಪೋಟ: ಐವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಅಫ್ಘಾನಿಸ್ತಾನದಲ್ಲಿ ತೈಲ ಕಂಪನಿಯ ಉದ್ಯೋಗಿಗಳು ಸಾಗಿಸುತ್ತಿದ್ದ ವಾಹನದಲ್ಲಿ ಸ್ಫೋಟ ಆಗಿದ್ದು, ಐದು ಮಂದಿ ಮೃತಪಟ್ಟಿದ್ದಾರೆ.

ಇಂದು ಮುಂಜಾನೆ ಹೈರಾತಾನ್ ಆಯಿಲ್ ನೌಕರರಿಗೆ ಸೇರಿದ ಬಸ್‌ನಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ಹಿಂದೆ ಯಾರಿದ್ದಾರೆ ಎನ್ನುವ ಮಾಹಿತಿ ದೊರೆತಿಲ್ಲ ಎಂದು ಬಾಲ್ಖ್ ಪ್ರಾಂತ್ಯದ ಪೊಲೀಸ್ ವಕ್ತಾರ ಮೊಹಮ್ಮದ್ ಆಸಿಫ್ ವಜೇರಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!