July 28, 2026
Tuesday, July 28, 2026
spot_img

ಅಸ್ಸಾಂನ ಮೆಟಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ: ನಾಲ್ವರು ಸ್ಥಳದಲ್ಲೇ ಸಾ*ವು, ಐವರು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಸ್ಸಾಂನ ಮೆಟಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ.

ಕಚಾರ್‌ ಜಿಲ್ಲೆಯಲ್ಲಿರುವ ಲೋಹ ಸಂಸ್ಕರಣಾ ಕಾರ್ಖಾನೆಯೊಂದರಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಕಾರ್ಖಾನೆಯ ಒಳಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ.

ಸ್ಫೋಟದ ತೀವ್ರತೆಗೆ ಕರಗಿದ ಬಿಸಿ ಲೋಹವು ಸುತ್ತಲೂ ಸಿಡಿದು ಹತ್ತಿರದಲ್ಲಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಹಾಗೂ ಚಿಕಿತ್ಸೆ ವೇಳೆ ಮೃತಪಟ್ಟರೆ, ಗಾಯಗೊಂಡ ಇಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ನಂತರ ಗುವಾಹಟಿಯಲ್ಲಿ ತಲೆಮರೆಸಿಕೊಂಡಿದ್ದ ಕಾರ್ಖಾನೆಯ ಮಾಲೀಕನನ್ನು ಸೋಮವಾರ ಬಂಧಿಸಲಾಗಿದ್ದು, ಉಳಿದ ನಾಲ್ವರನ್ನು ಕಚಾರ್‌ನಲ್ಲಿ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಠಿಣ ನಿಬಂಧನೆಗಳಡಿ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ರಾಜ್ಯ ಸಚಿವ ಕೌಶಿಕ್ ರೈ, ಘಟನೆಯ ಕುರಿತು ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಲಾ 5 ಲಕ್ಷ ರೂ. ಆರ್ಥಿಕ ಪರಿಹಾರ ಘೋಷಿಸಿದ್ದು, ಜಿಲ್ಲೆಯಾದ್ಯಂತ ಎಲ್ಲಾ ಕೈಗಾರಿಕಾ ಘಟಕಗಳ ಸುರಕ್ಷತಾ ತಪಾಸಣೆ ನಡೆಸಲು ಸೂಚಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !