ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ದುಬೈ ನಗರದ ಹಲವು ಭಾಗಗಳಲ್ಲಿ ಬುಧವಾರ ಮಧ್ಯರಾತ್ರಿ ಭಾರೀ ಸ್ಫೋಟದ ಸದ್ದು ಕೇಳಿಸಿದ್ದು, ಜನ ಭಯಭೀತರಾಗಿದ್ದಾರೆ.
ಇದಕ್ಕೆ ಕಾರಣ ಕೂಡ ತಿಳಿದುಬಂದಿದ್ದು, ಜೆಬೆಲ್ ಅಲಿ ಬಂದರಿನಲ್ಲಿ ಲಂಗರು ಹಾಕಿದ್ದ ಹಡಗಿನೊಳಗಿನ ಕಂಟೇನರ್ನಲ್ಲಿ ಬೆಂಕಿ ಕಾಣಿಸಿ ಸ್ಫೋಟವಾಗಿದೆ.
ಈ ಬಗ್ಗೆ ದುಬೈ ಮಾಧ್ಯಮ ಕಚೇರಿ ಸ್ಪಷ್ಟಪಡಿಸಿದ್ದು, ದುಬೈ ನಾಗರಿಕ ರಕ್ಷಣಾ ತಂಡ ಬೆಂಕಿ ನಂದಿಸುವ ಕೆಲಸ ಮಾಡುತ್ತಿದೆ. ದುಬೈ ಮರೀನಾ ಪ್ರದೇಶದಲ್ಲಿ ವಾಸಿಸುವ ಜನರಿಗೆ ಸ್ಫೋಟದ ಸದ್ದು ಕೇಳಿಸಿದ್ದು, ಮನೆ ಕಿಟಕಿ, ಬಾಗಿಲುಗಳು ಅಲ್ಲಾಡಿವೆ ಎನ್ನಲಾಗಿದೆ.