ಪಟಾಕಿ ಗೋದಾಮಿನಲ್ಲಿ ಭಾರೀ ಸ್ಫೋಟ: ಮಹಿಳೆಯರ ಸಹಿತ ಏಳು ಮಂದಿ ಸಾವು

ಹೊಸದಿಗಂಥ ಡಿಜಿಟಲ್ ಡೆಸ್ಕ್:
ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಟ ಇಬ್ಬರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಕುರುವಿಮಲೈ ಗ್ರಾಮದಲ್ಲಿ ಇಂದು ನಡೆದಿದೆ.
ಖಾಸಗಿ ಗೋದಾಮಿನಲ್ಲಿ ಈ ಘಟನೆ ಸಂಭವಿಸಿದ್ದು, ಪ್ರಾಥಮಿಕ ಮಾಹಿತಿಗಳ ಪ್ರಕಾರ
ಈ ಗೋದಾಮಿನ 30 ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದರು. ಈ ಸಂದರ್ಭ ಸ್ಫೋಟ ಸಂಭವಿಸಿದೆ. ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿ ಗೋದಾಮಿನ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!