SHOCKING | ಇಂದಿರಾನಗರದ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ, ಭಾರೀ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿ ಬೆಂಗಳೂರಿನ ಇಂದಿರಾನಗರದ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ.

ಸ್ಫೋಟದಲ್ಲಿ ಐವರು ಗಮಬೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭದ್ರತಾ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಂಭೀರ ಗಾಯ!ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಫೇಮಸ್ ಆಗಿರುವ ರಾಮೇಶ್ವರಂ ಕೆಫೆಗೆ ಬ್ಲಾಸ್ಟ್‌ನಿಂದಾಗಿ ಹೆಚ್ಚು ಹಾನಿಯಾಗಿದೆ. ಅಪರಿಚಿತರೊಬ್ಬರು ತಂದಿಟ್ಟ ಬ್ಯಾಗ್‌ನಲ್ಲಿದ್ದ ವಸ್ತು ಸ್ಫೋಟಗೊಂಡಿದೆ. ಇದರೊಂದಿಗೆ ಸಿಲಿಂಡರ್ ಕೂಡ ಬ್ಲಾಸ್ಟ್ ಆಗಿದೆ ಎಂದು ಹೇಳಲಾಗಿದೆ.

ಬ್ಯಾಗ್ ತಂದಿಟ್ಟಿದ್ದು ಯಾರು ಎನ್ನುವ ಬಗ್ಗೆ ಮಾಹಿತಿ ದೊರಕಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!